Breaking News

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ಕೆ.ಶಿವಕುಮಾರ್

Spread the love

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದು, ಅದು ಸಹಜ. ನಾನು ಕೂಡ ನನ್ನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ. ನಮ್ಮ ಜನರ ಎದುರು ನಮ್ಮ ಅಧಿಕಾರ ತೋರಲು ಆಗುವುದಿಲ್ಲ. ಹೀಗಾಗಿ ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಶಾಂತಿ ಕಾಪಾಡುವುದೇ ಕಾಂಗ್ರೆಸ್ ಸಂಕಲ್ಪ. ಈ ಕೃತ್ಯವನ್ನು ಏಕಾಏಕಿಯಾಗಿ ಎಂಇಎಸ್ ಅಥವಾ ಇತರೆ ಸಂಘಟನೆ ಮಾಡಿದೆ ಎಂದು ಹೇಳಲು ಸಾಧ್ಯವಿಲ್ಲ. ಅದು ಸಾಬೀತಾಗಬೇಕು. ಕೆಲವು ಕಿಡಿಗೇಡಿಗಳು ಶಾಂತಿಭಂಗ ಮಾಡಲು ಈ ಕೃತ್ಯ ಎಸಗಿದ್ದಾರೆ. ಸರ್ಕಾರ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರ ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಅವರದೇ ಪಕ್ಷದ ಹಲವರನ್ನು ಪ್ರಕರಣದಿಂದ ಮುಕ್ತಿಗೊಳಿಸಿದ್ದು, ಈ ಘಟನೆಗಳಿಗೆಲ್ಲಾ ಅದೇ ಮೂಲ ಕಾರಣವಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕನ್ನಡಪರ ಸಂಘಟನೆಗಳು, ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿಯವರು ಸೇರಿದಂತೆ ಯಾರೊಬ್ಬರೂ  ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೊಲೀಸ್ ಅಧಿಕಾರಿಗಳು ರಾಜಕಾರಣಿಗಳ ಮಾತು ಕೇಳುವುದನ್ನು ಬಿಟ್ಟು ತಮ್ಮ ಕೆಲಸ ತಾವು ಮಾಡಬೇಕು’ ಎಂದರು.
ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್ ಅಧಿಕಾರಿಗಳು ಠಾಣೆ ಮುಂದೆ ತಮ್ಮ ಸಮವಸ್ತ್ರ ಬಿಟ್ಟು ಕಾವಿ ಬಟ್ಟೆ ಹಾಕಿದರೆ ಪರಿಸ್ಥಿತಿ ಏನಾಗುತ್ತದೆ?’ ಎಂದು ಕೇಳಿದರು.

Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ