Breaking News

ಬೆಳಗಾವಿಯ ಅಧಿವೇಶನದಲ್ಲಿ ನಾಳೆಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ : ಸಚಿವ ಸಂಪುಟ ತೀರ್ಮಾನ

Spread the love

ಬೆಳಗಾವಿ : ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಪ್ರಮುಖ ನಿರ್ಧಾರವೂ ಇದೆ.

ಪ್ರತಿ ಪಕ್ಷಗಳ ವಿರೋಧದ ನಡುವೆಯೂ ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ. ವಿಧಾನಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಪರಿಷತ್ತಿನಲ್ಲಿ ಪೂರ್ಣ ಬಹುಮತಕ್ಕೆ ಜೆಡಿಎಸ್ ಸದಸ್ಯರ ಬೆಂಬಲ ಅನಿವಾರ್ಯವಾಗಿದೆ.

ಎರಡು ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಈ ಬೆಳಗಾವಿ ಅಧಿವೇಶನದಲ್ಲಿಯೇ ಅನುಮೋದನೆ ಪಡೆಯುವುದು ಬಿಜೆಪಿ ಸರ್ಕಾರದ ಚಿಂತನೆ ಆಗಿದೆ. ಒಂದಿಷ್ಟು ಮಾರ್ಪಾಡುಗಳೊಂದಿಗೆ ಯಥಾವತ್ತಾಗಿ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನಾಳೆಯೇ ವಿಧೇಯಕ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಆರ್ ಅಶೋಕ್ ಸೇರಿದಂತೆ ಹಲವು ಸಚಿವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಿಂದಿನ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲಿ ಮತಾಂತರ ನಿಷೇಧ ಕಾಯ್ದೆ ವಿಚಾರ ಪ್ರಸ್ತಾಪ ಆಗಿರಲಿಲ್ಲ. ಆದರೆ, ಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ಪಡೆದ ಸಿಎಂ ಕಾಯ್ದೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ