ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಪುಂಡಾಟಕ್ಕೆ ಡಿ.ಕೆ ಶಿವಕುಮಾರ್ ಅವ್ರೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ನವ್ರು ಹತಾಶೆಯ ಭಾವದಲ್ಲಿದ್ದಾರೆ. ಹೀಗಾಗಿ ದೇಶದಲ್ಲಿ ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಜೊತೆಗೆ ಇದೆಲ್ಲದರ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದು, ಅವರೇ ಈ ಪುಂಡಾಟದ ಹಿಂದಿನ ಅಸಲಿ ನಿರ್ದೇಶಕ ಮತ್ತು ನಿರ್ಮಾಪಕ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದು, ಡಿಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್ ಅವ್ರ ಖಟ್ಟರ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು. ಇದ್ರ ಉದ್ದೇಶ ಜಾತಿ ಸಂಘರ್ಷ, ಭಾಷಾ ಸಂಘರ್ಷ ಹುಟ್ಟು ಹಾಕಬೇಕು, ರಾಜಕೀಯ ದುರ್ಲಾಭ ಪಡೆದುಕೊಳ್ಳಬೇಕು. ಇವರ ಈ ಸಂಚನ್ನು ಬಯಲಿಗೆಳೆಯಬೇಕು ಎಂದು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡುತ್ತೇನೆ ಎಂದು ಸಿಟಿ ರವಿ ಹೇಳಿದ್ದಾರೆ.
Laxmi News 24×7