Breaking News

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..

Spread the love

ಬೆಳಗಾವಿ. ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..

 

ಜಾಗನೂರ, ಪಾಮಲದಿನ್ನಿ, ಬಡಿಗವಾಡ ಹಾಗೂ ರಾಜಪೂರ ಗ್ರಾಮಸ್ಥರ ಕತ್ತಿ ವಿರುದ್ಧ ಕತ್ತಿ ಮಸೆಯತೊಡಗಿದ್ದಾರೆ

ಕತ್ತಿ ಒಡೆತನದವಿಶ್ವರಾಜ್ ಸಕ್ಜರೆ ಕಾರ್ಖಾನೆಯ ವಿಷಪೂರಿತ ರಾಸಾಯನಿಕ ನೀರು ಹಳ್ಳಗಳಿಗೆ ಬಿಡುತ್ತಿರುವ ಹಿನ್ನಲೆ ಜಾನುವಾರುಗಳಿಗೆ ಚರ್ಮ ರೋಗ ಕಾಯಿಲೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

 

ಸಚಿವ ಕತ್ತಿ ಪ್ರಭಾವದಿಂದಾಗಿ ಸ್ಥಳಕ್ಕೆ ತಹಶಿಲ್ದಾರ ಹಾಗೂ ಜಿಲ್ಲಾಧಿಕಾರಿಗಳು ಬರುತ್ತಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಕತ್ತಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ರೈತರು. ಆಗ್ರಹಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ನೀರು ಬಿಡುತ್ತಿರುವ ಬಗ್ಗೆ ದೂರು ನೀಡಿದರು ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರ ಅಳಲು ತೋಡಿಕೊಂಡಿದ್ದಾರೆ.

 

ಈಗಾಗಲೇ ಹದಿನೈದಕ್ಕೂ ಹೆಚ್ಚು ಜಾನುವಾರುಗಳ ಸಾವಾಗಿದ್ದು, ಸಚಿವ ಕತ್ತಿ ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ