Breaking News

ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗಕ್ಕೆ ಸಚಿವ ಸಂಪುಟದಿಂದ ಆಡಳಿತಾತ್ಮಕ ಅನುಮೋದನೆ

Spread the love

ಬೆಳಗಾವಿ: ಕಿತ್ತೂರು ಮೂಲಕ ಹಾದುಹೋಗುವ ಬೆಳಗಾವಿ-ಧಾರವಾಡ ನಡುವಿನ 73 ಕಿ.ಮೀ ಉದ್ದದ ಹೊಸ ರೈಲು ಮಾರ್ಗಕ್ಕೆ ಮಂಗಳವಾರ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

927.4 ಕೋಟಿ ರೂ. ವೆಚ್ಚದ ಈ ಹೊಸ ರೈಲ್ವೆ ಯೋಜನೆಯು ಬೆಳಗಾವಿ ಮತ್ತು ಧಾರವಾಡ ನಡುವಿನ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.

ಈ ಹೊಸ ರೈಲು ಮಾರ್ಗದಲ್ಲಿ ಐತಿಹಾಸಿಕ ಕಿತ್ತೂರು ಪಟ್ಟಣ ಸೇರಿದಂತೆ 11 ಹೊಸ ರೈಲು ನಿಲ್ದಾಣಗಳನ್ನು ಹೊಂದಿರುತ್ತದೆ.

ಪ್ರಸ್ತುತ ಎರಡು ನಗರಗಳ ನಡುವಿನ ರೈಲು ಮಾರ್ಗದಲ್ಲಿ ಮೂರು ಗಂಟೆಗಳ ಪ್ರಯಾಣದ ಸಮಯಕ್ಕೆ ಹೋಲಿಸಿದರೆ ಬೆಳಗಾವಿ ಮತ್ತು ಧಾರವಾಡ ನಡುವಿನ ಹೊಸ ಮಾರ್ಗ ಪ್ರಯಾಣದ ಅವಧಿ ಒಂದು ಗಂಟೆ ಕಡಿಮೆಯಾಗುತ್ತದೆ.

ನೀರಾವರಿ ಇಲಾಖೆಯ ಅಡಿಯಲ್ಲಿ ಬರುವ ಸಂಸ್ಥೆಗಳಿಗೆ 1,650 ಕೋಟಿ ರೂ.ಗಳ ಸಾಲ ನೀಡುವ ಪ್ರಸ್ತಾವನೆ ಸೇರಿದಂತೆ ಹಲವಾರು ಇತರ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ