Breaking News

ಫೆಬ್ರವರಿ ಅಪಾಯ: ಭಾರತದಲ್ಲಿ ದಿನಕ್ಕೆ 1.5 ಲಕ್ಷ ಜನರಿಗೆ ಓಮಿಕ್ರಾನ್ ಸೋಂಕು!?

Spread the love

ನವದೆಹಲಿ, ಡಿಸೆಂಬರ್ 21: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಭೀತಿ ಹೆಚ್ಚುತ್ತಿದೆ. 2022ರ ಫೆಬ್ರವರಿ ತಿಂಗಳ ಹೊತ್ತಿಗೆ ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಪ್ರಕರಣಗಳು ವರದಿಯಾಗುವ ಅಪಾಯವಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ

ಕೊವಿಡ್-19 ಮೂರನೇ ಅಲೆಯು ಮುಂಬರುವ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಹೆಚ್ಚಾಗುವ ಸಾಧ್ಯತೆ ಇದ್ದು, ಅಲ್ಲಿಂದ ಮುಂದಿನ ಒಂದೇ ತಿಂಗಳಿನಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.?ಕಾನ್ಪುರ ಐಐಟಿಯ ಮಣೀಂದ್ರ ಅಗರವಾಲ್ ಮತ್ತು ಹೈದರಾಬಾದ್‌ ಐಐಟಿಯ ಎಂ ವಿದ್ಯಾಸಾಗರ್, ಮಾದರಿ ಸಹ ಸಂಸ್ಥಾಪಕರಾಗಿದ್ದಾರೆ. 2022ರ ಫೆಬ್ರವರಿ ತಿಂಗಳಿನಲ್ಲಿ ಭಾರತವು ಅತಿಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಈ ಅವಧಿಯಲ್ಲಿ ದೇಶದಲ್ಲಿ ಪ್ರತಿನಿತ್ಯ 1.5 ರಿಂದ 1.8 ಲಕ್ಷ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳಿರುತ್ತದೆ. ಭಾರತೀಯರು ಈಗಾಗಲೇ ಪಡೆದಿರುವ ಕೊವಿಡ್-19 ಲಸಿಕೆಯನ್ನು ಮೀರಿ ಓಮಿಕ್ರಾನ್ ಸೋಂಕು ಹರಡುವ ಸಾಮರ್ಥ್ಯವನ್ನು ಹೊಂದಿರುವುದೇ ನಿಜವಾದರೆ, ಫೆಬ್ರವರಿ ಹೊತ್ತಿಗೆ ಪರಿಸ್ಥಿತಿ ಕೈತಪ್ಪುವ ಅಪಾಯವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ