Breaking News

ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳ ಶಿಕ್ಷಕರ ನೇಮಕಕ್ಕೆ ಕ್ರಮ : ಸಿಎಂ ಬೊಮ್ಮಾಯಿ

Spread the love

ಬೆಳಗಾವಿ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ. 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ನಿರ್ವಹಿಸಲಾಗುತ್ತಿದೆ. ಈ ಶಾಲೆಗೆಳಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು.

ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಳೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.ಅಲ್ಲಿಯವರೆಗೂ ಅತಿಥಿ ಶಿಕ್ಷಕರ ಮೂಲಕ ಶಾಲೆಗಳನ್ನು ನಡೆಸಲಾಗುವುದು ಎಂದರು.

ಇದೇ ವೇಳೆಯಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ತಮ್ಮ ಕ್ಷೇತ್ರದಲ್ಲಿ 7 ಶಾದಿ ಮಹಲ್‍ಗಳು ಮಂಜೂರಾಗಿದ್ದರೂ ಕೂಡ ಅನುದಾನ ಬಿಡುಗಡೆಯಾಗದಿರುವ ಕುರಿತು ಕೇಳಿದ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಕೋವಿಡ್ ಲಾಕ್‍ಡೌನ್ ಕಾರಣದಿಂದ ಹಲವಾರು ಅನುದಾನಗಳನ್ನು ಕಡಿತಗೊಳಿಸಲಾಗಿದೆ. ಅಲ್ಪಸಂಖ್ಯಾತರ ಶಿಕ್ಷಣ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಒದಗಿಸಲಾಗುವುದು ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26

Spread the love ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26 ಮೊಬೈಲ್ ಗೀಳಿನಿಂದ ಹೊರ ಬಂದು ಕ್ರೀಡೆ-ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ