Breaking News

ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ: ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ

Spread the love

ಜನವರಿ 15ರ ನಂತರ ಕೋವಿಡ್ ಮೂರನೇ ಅಲೆಗೆ ಎಲ್ಲರೂ ಸಿದ್ಧರಾಗಿ ಎಂದು ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮುನ್ಸೂಚನೆ ನೀಡಿದ್ದಾರೆ.

ಬೆಳಗಾವಿಯ ಕೆಎಲ್‍ಇ ಕ್ಯಾಂಪಸ್‍ನಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಇಲಾಖೆಯ ಸಮಸ್ಯೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಂಡರು. ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಂಬಳ, ಆಂಬ್ಯುಲೆನ್ಸ್ ಡ್ರೈವರ್ ಗಳಿಗೆ ಸರಿಯಾದ ವೇತನ ನೀಡುತ್ತಿರುವ ಬಗ್ಗೆಯೂ ಪರಿಶೀಲಿಸಿದರು. ಎನ್‍ಎಚ್‍ಎಮ್ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಪರಿಶೀಲನಾ ಸಭೆ ಅವಲೋಕಿಸಿ, ರಾಷ್ಟ್ರೀಯ ಯೋಜನೆಗಳು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಪ್ರಶ್ನಿಸಿದರು. ರೋಗಿಗಳೊಂದಿಗೆ ಕುಳಿತುಕೊಂಡು ಊಟ ಮಾಡಿ ರುಚಿ ಪರಿಶೀಲಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಳಗಾವಿ ಜಂಟಿ ಆರೋಗ್ಯಾಧಿಕಾರಿ ಡಾ.ಅಪ್ಪಾಸಾಹೇಬ ನರಟ್ಟಿ, ಡಿಎಚ್‍ಒ ಡಾ.ಎಸ್.ವ್ಹಿ.ಮುನ್ಯಾಳ ಸೇರಿದಂತೆ ಧಾರವಾಡ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು

Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ