Breaking News

ಮೊಟ್ಟೆ, ಬಾಳೆ ಹಣ್ಣಿನಲ್ಲಿ ‘ಶಾಲಾ ಮಕ್ಕಳಿಗೆ’ ಯಾವುದು ಇಷ್ಟ ಗೊತ್ತಾ? ಸರ್ವೆಯಲ್ಲಿ ತಿಳಿದು ಬಂತು ಅಚ್ಚರಿ ಫಲಿತಾಂಶ

Spread the love

ಕೊಪ್ಪಳ: ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಸಂಬಂಧಪಟ್ಟಂತೆ ಕೆಲವು ವಿರೋಧ ವ್ಯಕ್ತಪಡಿಸುತ್ತಿದ್ದು, ಇನ್ನೂ ಕೆಲವು ಮಂದಿ ಪರವಾಗಿ ಮಾತನಾಡುತ್ತಿದ್ದಾರೆ.
ಇನ್ನೂ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಹಲವು ಮಂದಿ ಸ್ವಾಮೀಜಿಗಳು ಸರ್ಕಾರದ ವಿರುದ್ದ ಕಿಡಿಕಾರುತ್ತಿದ್ದು, ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇವೆಲ್ಲದರ ನಡುವೆ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಅವರ ದೈಹಿಕ ಮಾನಸಿಕ ಆರೋಗ್ಯಕ್ಕೆ ಮೊಟ್ಟೆ ಅವಕಶ್ಯಕವಾಗಿದ್ದು, ಮೊಟ್ಟೆ ತಿನ್ನುವ ಮಕ್ಕಳು, ಬೇಡವಾದವರು ಬಾಳೆ ಹಣ್ಣು ತಿನ್ನಲ್ಲಿ, ಮಕ್ಕಳ ಆಹಾರದ ಹಕ್ಕನ್ನು ಕಸಿದುಕೊಳ್ಳುವ ಅವಶ್ಯಕತೆ ಇಲ್ಲ ಅಂಥ ಹಲವು ಮಂದಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಕೊಪ್ಪಳ ಜಿಲ್ಲೆಯಲ್ಲಿ ದಾಸೋಹದ ಅಧಿಕಾರಿಗಳು ನಡೆಸಿದ ಸರ್ವೆಯಲ್ಲಿ ಶೇ 93 ಮಂದಿ ಮಕ್ಕಳು ಮೊಟ್ಟೆ ತಿನ್ನುವುದಕ್ಕೆ ಒಲವು ವ್ಯಕ್ತಪಡಿಸಿದ್ದು, ಇದೇ ವೇಳೇ ಕೇವಲ ಶೇ 6.2 ಮಂದಿ ಮಕ್ಕಳು ಬಾಳೆ ಹಣ್ಣು ತಿನ್ನುವುದಕ್ಕೆ ಒಲವು ವ್ಯಕ್ತಪಡಿಸಿದ್ದಾರಂತೆ. ಮಕ್ಕಳಿಗೆ ಮೊಟ್ಟೆ ನೀಡದಂತೆ ನಡೆದ ಪ್ರತಿಭಟನೆ ಹಿನ್ನಲೆಯಲ್ಲಿ ಅಧಿಕಾರಿಗಳು ಈ ಸರ್ವೆ ನಡೆಸಿದ್ದು, ಈಗ ಮೊಟ್ಟೆಯನ್ನು ಮಕ್ಕಳಿಗೆ ನೀಡದಂತೆ ಪ್ರತಿಭಟನೆ ನಡೆಸಿದ್ದವರು, ಏನು ಹೇಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ