ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಬುಧವಾರ ರಾತ್ರಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ.
ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತ ದುರ್ದೈವಿಗಳು.
ಬೆಂಗಳೂರಿನ ಸಾರಕ್ಕಿ ನಿವಾಸಿಗಳಾದ ಇವರಿಬ್ಬರೂ ಊಟ ಮಾಡಲೆಂದು ಬುಧವಾರ ರಾತ್ರಿ ಬನ್ನೇರುಘಟಕ್ಕೆ ಬೈಕ್ನಲ್ಲಿ ಹೋಗಿದ್ದರು.
ಊಟ ಮುಗಿಸಿ ವಾಪಸ್ ಬರುವ ವೇಳೆ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೌಶಿಕ್ ಮತ್ತು ಸುಷ್ಮಾ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಪಘಾತ ಸಂಭವಿಸುತ್ತಿದ್ದಂತೆ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.