Breaking News

ಪಿಯು ಸೈನ್ಸ್ ಕಾಲೇಜು ಉಪನ್ಯಾಸಕ ಮಾರ್ಗಮಧ್ಯೆ ದುರಂತ ಅಂತ್ಯ: ಸಾವಿನ ಸುತ್ತ ಅನುಮಾನದ ಹುತ್ತ

Spread the love

ವಿಜಯಪುರ: ಪಿಯು ಸೈನ್ಸ್ ಕಾಲೇಜಿನ ಉಪನ್ಯಾಸಕರೊಬ್ಬರು ತರಗತಿ ಮುಗಿಸಿಕೊಂಡು ವಾಪಸ್​ ಮನೆಗೆ ಹೋಗುವ ಮಾರ್ಗಮಧ್ಯೆ ದುರಂತ ಅಂತ್ಯಕಂಡಿದ್ದು, ಸಾವಿನ ಸುತ್ತ ಅನುಮಾನ ಹುತ್ತ ಬೆಳೆದಿದೆ.

ತಾಳಿಕೋಟಿಯ ಕಾಶೀನಾಥ ಪುರಾಣಿಕಮಠ(27) ಮೃತರು.

ಇವರು ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಎಕ್ಸ್​ಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಎಂದಿನಂತೆ ನಿನ್ನೆ(ಶುಕ್ರವಾರ) ಕಾಲೇಜಿಗೆ ಹೋಗಿದ್ದರು. ವಾಪಸ್​ ಮನೆಗೆ ಬೈಕ್​ನಲ್ಲಿ ಬರುವಾಗ ಮಾರ್ಗಮಧ್ಯೆ ಮಲಗಲದಿನ್ನಿ ಗ್ರಾಮದ ಬಳಿ ಮೃತಪಟ್ಟಿದ್ದಾರೆ.

ಮೇಲ್ನೋಟಕ್ಕೆ ಬೈಕ್​ ಅಪಘಾತವಾದಂತೆ ಕಂಡುಬಂದರೂ ಇದೊಂದು ಕೊಲೆ. ಅಪಘಾತ ಆಗಿದೆ ಎಂಬಂತೆ ಯಾರೋ ಕಿಡಿಗೇಡಿಗಳು ಬಿಂಬಿಸಲು ಯತ್ನಿಸಿದ್ದಾರೆ ಎಂದು ಮೃತ ಉಪನ್ಯಾಸಕನ ಪಾಲಕರು ಸಂಶಯ ವ್ಯಕ್ತಪಡಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ