Breaking News

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ

Spread the love

ಹಾವೇರಿ : ನಮ್ಮ ಸರ್ಕಾರದ ಒಂದೂವರೆ ವರ್ಷದ ಅವಧಿಯಲ್ಲಿ ನಗರ ಪ್ರದೇಶದಲ್ಲಿ ಒಂದು ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಸೇರಿದಂತೆ ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಣೆಬೆನ್ನೂರು ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಣೇಬೆನ್ನೂರ ಮತ್ತು ಬ್ಯಾಡಗಿ ತಾಲೂಕಿನ ಕೋವಿಡ್‍ನಿಂದ ಮೃತರಾದವರ ಕುಟುಂಬಗಳಿಗೆ ತಲಾ ರೂ. ಒಂದು ಲಕ್ಷ ಪರಿಹಾರ ಚೆಕ್ ವಿತರಿಸಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರದ ಒಂದೂವರೆ ವರ್ಷದ ಅವಧಿಯಲ್ಲಿ ನಗರ ಪ್ರದೇಶದಲ್ಲಿ ಒಂದು ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಸೇರಿದಂತೆ ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ ಐದು ಲಕ್ಷ ಮನೆಗಳನ್ನು ವಸತಿ ರಹಿತರಿಗೆ ನೀಡಲು ಸರ್ಕಾರ ಘೋಷಣೆ ಮಾಡಿದೆ ಎಂದರು.

ನಮ್ಮ ಸರ್ಕಾರದ ಅಧಿಕಾರ ಅವಧಿಯ ಮುಂದಿನ ಒಂದೂವರೆ ವರ್ಷಗಳ ಕಾಲ ಅಧಿಕಾರ ರಾಜಕಾರಣಮಾಡದೇ ಜನಪರ ರಾಜಕಾರಣಮಾಡುವೆ. ರಾಜ್ಯದ ಜನರ ಬದುಕಿನಲ್ಲಿ ಬಹುದೊಡ್ಡ ಬದಲಾವಣೆ ತರುತ್ತೇನೆ. ಜನರ ಕಲ್ಯಾಣಕ್ಕಾಗಿ ಆಡಳಿತದಲ್ಲಿ ಹೊಸ ಚಿಂತನೆ, ಹೊಸ ಚೈತನ್ಯ ಹಾಗೂ ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

 

ಅಭಿವೃದ್ಧಿ ಎನ್ನುವುದು ನಿರಂತರವಾಗಿ ಚಾಲನೆಯಲ್ಲಿರುವ ಪ್ರಗತಿಯ ಚಕ್ರ. ಇದು ನಿರಂತರವಾಗಿದ್ರೆ ಎಲ್ಲ ರಂಗದಲ್ಲೂ ಸರ್ವಾಂಗೀಣ ಅಭಿವೃದ್ಧಿ ಆಗುತ್ತದೆ. ಬರುವ ದಿನಗಳಲ್ಲಿ ಎಲ್ಲ ವಿಚಾರಗಳಿಗೆ ಆದ್ಯತೆ ಕೊಟ್ಟು ಕಾರ್ಯಕ್ರಮ ರೂಪಿಸುತ್ತೇವೆ. ಜನರ ಬದುಕಿನಲ್ಲಿ ಸಮಗ್ರ ಬದಲಾವಣೆ ತರುವೆ. 2023ರ ಚುನಾವಣೆಯಲ್ಲಿ ಅಭಿವೃದ್ಧಿಯ ಮಾನದಂಡದಿಂದ ಜನರ ಮುಂದೆ ಹೋಗುವೆ ಎಂದು ಘೋಷಿಸಿದರು.

 

ಗ್ರಾಮೀಣ, ನಗರ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕು. ರೈತರ ಬದುಕು, ಕೂಲಿಕಾರರ ಶ್ರಮದಲ್ಲಿ, ತಾಯಂದಿರ ಬದುಕಿನಲ್ಲಿ ಅಭಿವೃದ್ಧಿಯಾಗಬೇಕು. ಧೀನದಲಿತರಿಗೆ, ಹಿಂದುಳಿದವರಿಗೆ ಸ್ವಾಭಿಮಾನದ ಬದುಕು ಕೊಡುವ ಕೆಲಸವಾಗಬೇಕು. ಅಂದಾಗ ಮಾತ್ರ ಪ್ರಗತಿಪರ ಹಾಗೂ ಕಲ್ಯಾಣ ರಾಜ್ಯವಾಗಲು ಸಾಧ್ಯ ಎಂದರು.

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಣೇಬೆನ್ನೂರಿನ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಮೆಡ್ಲೇರಿ ಹಾಗೂ ಹೊಳೆಆನ್ವೇರಿ ನೀರಾವರಿ ಕಾಮಗಾರಿಗೆ 206 ಕೋಟಿ ಮಂಜೂರ ಮಾಡಲಾಗಿದೆ. ಆಣೂರು ಕುಡಿಯುವ ನೀರಿನ ಯೊಜನೆಗೆ ರೂ.110 ಕೋಟಿ ಕಾಮಗಾರಿಗೆ ಬೆಳಗಾವಿ ಸಚಿವ ಸಂಪುಟ ಸಭೆಯಲ್ಲಿ ಅನುಮೊದನೆ ನೀಡಲಾಗಿದೆ. ಶಿಗ್ಗಾಂವಿ-ಸವಣೂರು, ಹಾನಗಲ್ ಮೂರು ತಾಲೂಕಿನ ಕುಡಿಯುವ ನೀರಿನ ಯೋಜನೆಗಳಿಗೆ ಅನುನೋದನೆ ನೀಡಲಾಗಿದೆ. ಕರೂರು ಗ್ರಾಮದಲ್ಲಿ ರೂ.ಮೂರು ವೆಚ್ಚದಲ್ಲಿ ಹೆಬ್ಬಾಗಿಲು ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ಡಿಸೆಂಬರ್‍ನಲ್ಲಿ ಉದ್ಘಾಟನೆ ಮಾಡುತ್ತೇನೆ ಎಂದು ಘೋಷಿಸಿದರು.

ರಾಣೇಬೆನ್ನೂರ ಅಭಿವೃದ್ಧಿ ಹಿನ್ನೆಯಲ್ಲಿ ಇಂದು ರೂ. ಐದು ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೊಟ್ಟ ಭರವಸೆಯಂತೆ ರೂ.20 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ