Breaking News

ಕರ್ನಾಟಕ ರಾಜ್ಯ ಬಂದ್‍ಗೆ ನಮ್ಮ ನೈತಿಕ ಬೆಂಬಲ ಇದೆ.: ಸಿದ್ದರಾಮಯ್ಯ

Spread the love

ಕರ್ನಾಟಕ ರಾಜ್ಯ ಬಂದ್‍ಗೆ ನಮ್ಮ ನೈತಿಕ ಬೆಂಬಲ ಇದೆ. ಕರ್ನಾಟಕದ ಬಾವುಟವನ್ನು ಮಹಾರಾಷ್ಟ್ರದಲ್ಲಿ ಸುಟ್ಟಿದ್ದಾರೆ. ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರ ಕೃತ್ಯ ಮತ್ತು ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಪುಂಡಾಟಿಕೆ ಖಂಡಿಸಿ ಡಿ.31ರಂದು ಕರ್ನಾಟಕ ಬಂದ್‍ಗೆ ಕೆಲ ಕನ್ನಡ ಸಂಘಟನೆಗಳು ಕರೆ ಕೊಟ್ಟಿವೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಬೆಂಗಳೂರಿನಲ್ಲಿ ಪ್ರತಿಕ್ರಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಂದ್‍ಗೆ ನಾವು ನೈತಿಕ ಬೆಂಬಲ ಕೊಡುತ್ತೇವೆ ಎಂದರು. ಇನ್ನು ಕರ್ನಾಟಕದ ಬಾವುಟವನ್ನು ಮಹಾರಾಷ್ಟ್ರದಲ್ಲಿ ಸುಟ್ಟಿದ್ದಾರೆ. ಮಹಾರಾಷ್ಟ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ನಾವು ಸದನದಲ್ಲಿ ನಿರ್ಣಯ ಅಂಗೀಕರಿಸಿದ್ದೇವೆ. ನಿರ್ಣಯ ಅಂಗೀಕರಿಸಿ ಸರ್ಕಾರ ಕೈಕಟ್ಟಿ ಕೂರುವುದಲ್ಲ. ನಿರ್ಣಯ ಮಹಾರಾಷ್ಟ್ರಕ್ಕೆ ಕಳಿಸಿ ಕ್ರಮಕ್ಕೆ ಒತ್ತಾಯಿಸಬೇಕು ಎಂದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ