Breaking News

ನಿನಗೆ ‘ರಾಜಕೀಯ’ ಸಹವಾಸ ಬೇಡಪ್ಪ: ಮಾಜಿ ಸಿಎಂ ಕುಮಾರಸ್ವಾಮಿ ಮಗನಿಗೆ ಹೀಗೆ ಹೇಳಿದ್ದೇಕೆ?

Spread the love

ಬೆಂಗಳೂರು: ರಾಜಕೀಯಕ್ಕಿಂತಲೂ ಹೆಚ್ಚಾಗಿ, ಕನ್ನಡ ಚಿತ್ರರಂಗದಲ್ಲಿ ಕಲಾವಿದನಾಗಿ ನಿಖಿಲ್​ ಅವರು ಅನೇಕ ವರ್ಷಗಳು ಈ ವೃತ್ತಿಯಲ್ಲಿ ತೊಡಗಿಕೊಳ್ಳಲಿ. ಉತ್ತಮವಾದ ಕಲಾವಿದನಾಗುವ ಸಾಮರ್ಥ್ಯವನ್ನು ದೇವರು ಅವರಿಗೆ ಕೊಟ್ಟಿದ್ದಾನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರನಲ್ಲಿ ಪುತ್ರ ನಿಖಿಲ್ ನಟನೆಯ ರೈಡರ್ ಸಿನಿಮಾ ವೀಕ್ಷಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮೂರನೇ ಸಿನಿಮಾದಲ್ಲಿ ನಿಖಿಲ್ ಅತ್ಯುತ್ತಮವಾಗಿ ಅಭಿನಯಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ನಟರ ಅವಶ್ಯಕತೆ ಇದೆ. ಅದನ್ನು ನಿಖಿಲ್​ ಪೂರೈಸಲಿ ಎಂದು ಸಲಹೆ ನೀಡಿದ್ದಾರೆ.

ರಾಜಕಾರಣದ ಹಿನ್ನೆಲೆಯಿಂದ ಸಿನಿಮಾ ಬಗ್ಗೆ ಹೆಚ್ಚು ಗಮನ ಇರಲಿಲ್ಲ. ಈ ಸಿನಿಮಾ ನೋಡಿದ ಬಳಿಕ ನನಗೆ ಅನಿಸಿದ್ದು ಏನೆಂದರೆ, ಅವರು ರಾಜಕಾರಣದಲ್ಲಿ ತೊಡಗಿಕೊಳ್ಳುವುದಕ್ಕಿಂತಲೂ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡ ಭಾಷೆಗೆ ಪ್ರಾಮಾಣಿಕ ಸೇವೆ ಸಲ್ಲಿಸಲಿ ಅಂತ ಅನಿಸಿದೆ. ಈ ಸಂಬಂಧ ನಾನು ಅವರ ಜತೆ ಮಾತನಾಡುತ್ತೇನೆ. ಚಿತ್ರರಂಗದಲ್ಲಿ ಮುಂದುವರಿಯುವ ಮುಖಾಂತರ ಒಳ್ಳೆಯ ಕಲಾವಿದ ಆಗಲಿ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ