Breaking News

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ

Spread the love

ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ.

ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್‍ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ ಮುನ್ನ ಆತನ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎರಡನೇ ವರದಿಯಲ್ಲಿ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನು ಈ ವೃದ್ಧ ಕಳೆದ ಮೂರು ವರ್ಷಗಳಿಂದ ಅನಾರೋಗ್ಯದಿಂದಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಹಾಗಾಗಿ ಈತನಿಂದ ಬೇರೆತಯವರಿಗೆ ಕೊರೊನಾ ತಗುಲಿರುವ ಸಾಧ್ಯತೆಗಳು ಕಡಿಮೆ ಇವೆ. ಮೃತ ವೃದ್ಧನ ಕುಟುಂಬಸ್ಥರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ