ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು.
ಹುಬ್ಬಳ್ಳಿ ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಹೇಳಿದ್ದಾರೆ. ಈ ಬಗ್ಗೆ ಯಾರೇ ಮಾತನಾಡಿದರು ಕ್ರಮ ಜರುಗುವುದು ನಿಶ್ಚಿತ. ಆದರೇ ಯಾರಿಗೂ ಕೂಡ ಕತ್ತು ಹಿಡಿದು ಹೊರಹಾಕುವಂತ ಪ್ರಮೇಯವೇ ಇಲ್ಲ ಎಂದರು.ಕೆಲವು ಆಕಾಂಕ್ಷಿಗಳಿಗೆ ನಿರಾಶೆ ಎಂಬುವಂತ ಮಾಧ್ಯಮ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ನಿರಾಶೆಯಾಗಿದೆ. ಯಾರಿಗೆ ಅಂತ ನೇರವಾಗಿ ಹೇಳಲು ಆಗುವುದಿಲ್ಲ. ಕೆಲವರು ಬೆಳಗಾವಿ ಅಧಿವೇಶನ ವೇಳೆಯಲ್ಲಿ ಸುವರ್ಣಸೌಧದಲ್ಲಿ ಓಡಾಡಿದ್ದಾರೆ ಅವರಿಗೆಲ್ಲ ನಿರಾಶೆಯಾಗಿದೆ ಎಂದು ಅವರು ಹೇಳಿದರು.