ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸುವುದು ಬಿಜೆಪಿಯ ಆಂತರಿಕ ವಿಚಾರವಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಲ್ಲಿಯವರೆಗೆ ಬೊಮ್ಮಾಯಿಯವರು ಸಿಎಂ ಆಗಿರುತ್ತಾರೋ ಅಲ್ಲಿಯವರೆಗೆ ಬೆಂಬಲ ಇದ್ದೇ ಇರುತ್ತದೆ.
2023ರ ವರೆಗೆ ಅವರೇ ಮುಂದುವರೆಯುತ್ತಾರೆ. ಅಲ್ಲಿಯವರೆಗೂ ನಮ್ಮ ಬೆಂಬಲವಿದೆ.
ನಾಯಕತ್ವ ಬದಲಾವಣೆ ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡುವುದು ಅಷ್ಟು ಸಮಂಜಸವಲ್ಲ.
ಯಡಿಯೂರಪ್ಪನವರು ಪಂಚಮಸಾಲಿ ಮೀಸಲಾತಿ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಹಾಗಾಗಿ ಅವರ ಮೇಲೆ ಅಸಮಾಧಾನವಿತ್ತು.