ಬೆಂಗಳೂರು : ಇಂದು ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಹಾಗೂ 57 ಗ್ರಾಮಪಂಚಾಯಿತಿಗಳ ಚುನಾವಣೆಯ ಫಲಿತಾಂಶ (Karnataka ULB Election Results) ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದೆ.
ಕೊಲ್ಹಾರ ಪಟ್ಟಣ ಪಂಚಾಯತಿ ವಾರ್ಡ್ ನಂಬರ್ 10 ರಲ್ಲಿ ಹಾಗೂ ವಾರ್ಡ್ ನಂಬರ್ 1 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ.
ಯಾದಗಿರಿ ಕಕ್ಕೇರಾ ಪುರಸಭೆ ನಾಲ್ಕು ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಕೊಪ್ಪಳ ಭಾಗ್ಯನಗರ ವಾರ್ಡ್ ನಂಬರ್ 1 ಹಾಗೂ ವಾರ್ಡ್ ನಂಬರ್ 11 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಧಾರವಾಡ : ಅಣ್ಣಿಗೇರಿ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ವಾರ್ಡ್ 9 ಪಕ್ಷೇತರ ಅಭ್ಯರ್ಥಿ ಗೆ ಗೆಲುವು ಪಡದುಕೊಂಡಿದ್ದಾರೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ.
ಬಿಡದಿ ಪುರಸಭೆಯಲ್ಲಿ 8 ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ 2 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಪಡೆದುಕೊಂಡಿದೆ.
ಉಡುಪಿಯ ಕಾಪು ಪುರಸಭೆಯಲ್ಲಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ.
ಮಲೆಬೆನ್ನೂರು ಪುರಸಭೆಯಲ್ಲಿ 3 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ.
ಬಳ್ಳಾರಿ : ಕುರುಗೋಡು ಪುರಸಭೆಯ 23 ವಾರ್ಡ್ ಗಳ ಪೈಕಿ 4 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, 1 ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದುಕೊಂಡಿದ್ದಾರೆ. 1 ವಾರ್ಡ್ ನಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ.