ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತವರಿನಲ್ಲೇ ಬಿಜೆಪಿ ಒಂದೂ ಸ್ಥಾನ ಗೆಲ್ಲದೇ ಆಘಾತಕ್ಕೆ ಒಳಗಾಗಿದ್ದರೆ, ಎಲ್ಲಾ 14 ಸ್ಥಾನಗಳಲ್ಲೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ.
ಎಂಕೆ ಹುಬ್ಬಳ್ಳಿಯ ಎಲ್ಲಾ 14 ಸ್ಥಾನಗಳೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ರಾಜಕೀಯ ಪಕ್ಷಗಳನ್ನು ಮತದಾರ ಸಂಪೂರ್ಣವಾಗಿ ತಿರಸ್ಕರಿಸಿದ್ದಾನೆ.
ಈ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ.
ಉಳಿದಂತೆ ಹಾವೇರಿಯ ಬಂಕಾಪುರ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರಕ್ಕೇರಿದೆ.