Breaking News

ಕಂದಾಯ ಇಲಾಖೆ: ITI, PUC, B.E ಪಾಸ್‌; 3000 ಭೂಮಾಪಕರ ಹುದ್ದೆಗಳಿಗೆ ಅರ್ಜಿ

Spread the love

ಬೆಂಗಳೂರು: ರಾಜ್ಯದಲ್ಲಿ ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲು 3000 ಭೂಮಾಪಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ನೇಮಕಾತಿ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿ ನಂತರ ತಡೆ ಹಿಡಿದಿತ್ತು.

ಇದೀಗ ಮತ್ತೆ ನೇಮಕಾತಿಗೆ ಚಾಲನೆ ನೀಡಿದೆ.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲೇ (rdservices.karnataka.gov.in ) ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು. ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಭೂಮಾಪಕ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆ ತಿಳಿಸಿದೆ.

ವಿದ್ಯಾರ್ಹತೆ: ಪಿಯುಸಿ (ವಿಜ್ಞಾನ ನಿಕಾಯ)ಯಲ್ಲಿ ಗಣಿತದಲ್ಲಿ ಶೇ 60 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಬಿ.ಇ, ಅಥವಾ ಸರ್ವೇ ಟ್ರೇಡ್‌ನಲ್ಲಿ ಐಟಿಐ, ಡಿಪ್ಲೋಮಾ ಪಡೆದಿರಬೇಕು.

ವಯಸ್ಸು: ಕನಿಷ್ಠ 18, ಗರಿಷ್ಠ 65 ವರ್ಷಗಳು

ಅರ್ಜಿ ಶುಲ್ಕ: ಅಭ್ಯರ್ಥಿಗಳು ನಾಡ ಕಚೇರಿಗಳಲ್ಲಿನ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್‌ ನೀಡಿ ₹ 1000 ಶುಲ್ಕ ಪಾವತಿಸಿ, ವಿಶಿಷ್ಟ ಅರ್ಜಿ ಸಂಖ್ಯೆ ಹೊಂದಿರುವ ಸ್ವೀಕೃತಿ ಪತ್ರ ಪಡೆಯಬೇಕು, ಈ ಸಂಖ್ಯೆ ಇಲ್ಲದಿದ್ದರೆ ಆನ್‌ಲೈನ್‌ ಅರ್ಜಿ ತೆರೆಯುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯ ವಿವರಗಳನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.


Spread the love

About Laxminews 24x7

Check Also

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

Spread the love ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ