Breaking News

ಪೊಲೀಸ್ ಇಲಾಖೆ ಸೇರಬಯಸುವವರಿಗೆ ಸಿಹಿಸುದ್ದಿ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು: ಪೊಲೀಸ್ ಇಲಾಖೆ ಸೇರಬಯಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಇಲಾಖೆಯ ಸಶಸ್ತ್ರ ಮೀಸಲು ಪಡೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಹುದ್ದೆ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ಡಿಎಆರ್) (ಪುರುಷ) ಮತ್ತು ಸೇವೆಯಲ್ಲಿರುವವರು (ಮಿಕ್ಕುಳಿದ ಮತ್ತು ಸ್ಥಳೀಯ ವೃಂದದ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪುರುಷ) (ಸ್ಥಳೀಯ ವೃಂದ) – 09
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪುರುಷ ) (ಮಿಕ್ಕುಳಿದ ವೃಂದ) – 50 ಹುದ್ದೆ
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇಲೆಯಲ್ಲಿರುವವರಿಗೆ ( ಸ್ಥಳೀಯ ವೃಂದ ) 01
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇವೆಯಲ್ಲಿರುವವರಿಗೆ (ಮಿಕ್ಕುಳಿದ ವೃಂದ) – 10
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಪರಸ್ಥಳೀಯ ವೃಂದ ) – 01 ಸೇರಿದಂತೆ 71 ಹುದ್ದೆಗಳು

ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅಧಿಕೃತ ವೆಬ್‌ಸೈಟ್ https://recruitment.ksp.gov.in ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅಂಚೆ ಮೂಲಕ ಅಥವಾ ಕಚೇರಿಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ ಇರೋದಿಲ್ಲ.

ಅರ್ಜಿ ಶುಲ್ಕ- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.500, ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250

ವಿದ್ಯಾರ್ಹತೆ- ಯುಜಿಸಿಯಿಂದ ಮಾನ್ಯತೆ ಪಡೆದಿರುವಂತ ಅಂಗೀಕೃತ ವಿಶ್ವವಿದ್ಯಾಲದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸುವ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ವಯೋಮಿತಿ- ದಿನಾಂಕ 27-01-2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷವಯಸ್ಸಾಗಿರಬೇಕು. ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು. ಸೇವಾನಿರತ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನಿಡಲಾಗಿದೆ.

ವೇತನ ಶ್ರೇಣಿ-ರೂ.37,900 ರಿಂದ ರೂ.70,850 ಜೊತೆಗೆ ಪಿಂಚಣಿ ಸೌಲಭ್ಯ ಅನ್ವಯವಾಗಲಿದೆ.

ನೇಮಕಾತಿ ವಿಧಾನ-ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಇದಲ್ಲದೇ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ದಿನಾಂಕ 28-12-2021ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ದಿನಾಂಕ 27-01-2022 ಅರ್ಜಿ ಸಲ್ಲಿಸಲು ಕೊನೆಯ ದಿನ
ದಿನಾಂಕ 29-01-2022 ಶುಲ್ಕವನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಕೊನೆಯ ದಿನ


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ