Breaking News

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಸರ್ಕಾರದಿಂದ ಆದೇಶ

Spread the love

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ಮಕ್ಕಳಿಗೆ ಒಂದರಿಂದ ಐದನೇ ತರಗತಿವರೆಗೆ ಶಿಕ್ಷಣ ನೀಡಲು 68 ವಸತಿ ಶಾಲೆಗಳನ್ನು ತೆರೆಯಲಾಗಿದೆ.

8500 ವಿದ್ಯಾರ್ಥಿಗಳು ಈ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ಶಾಲೆಗಳಿಗೆ ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಲಾಗುವುದು.

ಅಂಬೇಡ್ಕರ್ ಅವರ ಹೋರಾಟ, ದೇಶಕ್ಕೆ ಅವರು ನೀಡಿದ ಕೊಡುಗೆ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಲಾಗಿದೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ