ಬಾಗಲಕೋಟೆ : ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.
ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಬಾಗಲಕೋಟೆ ಭಾಗದಲ್ಲಿ ಕಬ್ಬಿನ ಟ್ರ್ಯಾಕ್ಟರ್ ಚಾಲಕರಿಗೆ ಲೈಸನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿರುವದನ್ನು ಗಮನಿಸಿದ್ದು, ಅಂತವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ರಾಜ್ಯದ 5 ಜಿಲ್ಲೆಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದನ್ನು ಮಾಡಲಾಗುತ್ತಿದೆ. ಲೈನಸ್ಸ್ ಪಡೆಯಬೇಕಾದರೆ ಪರೀಕ್ಷೆಯಲ್ಲಿ ಶೇ.69 ರಷ್ಟು ಫಲಿತಾಂಶ ಬರಲೇಬೇಕು. ಇದರಿಂದ ಉತ್ತಮ ಚಾಲಕರಿಗೆ ಹೊರಹೊಮ್ಮುತ್ತಿರುವದರಿಂದ ಅಪಘಾತದ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ. ಈ ಮೊದಲು ಮ್ಯಾನುವಲ್ ಆಗಿ ಚಾಲನಾ ಪ್ರಮಾಣ ಪತ್ರ ನೀಡಲಾಗುತ್ತಿತ್ತು. ಈ ನೂತನ ತಂತ್ರಜ್ಞಾನ ಅಳವಡಿಸುವ ಮೂಲಕ ಚಾಲನಾ ಪರವಾನಿಗೆ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.
ಅಥಣಿಯಲ್ಲಿ 7.5 ಕೋಟಿ, ಚಿಕ್ಕೋಡಿಯಲ್ಲಿ 9 ಕೋಟಿ, ಜಮಖಂಡಿಯಲ್ಲಿ 7 ಕೋಟಿ ಹಾಗೂ ಬಾಗಲಕೋಟೆಯಲ್ಲಿ 9 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸಲಾಗುತ್ತಿದೆ. ಹಾವೇರಿಯಲ್ಲಿ ಈಗಾಗಲೇ ಈ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆ ರ ರಾಜ್ಯದ 30 ಜಿಲ್ಲೆಗಳಲ್ಲಿ ಆಗಬೇಕಿದೆ. ಇದರ ಜೊತೆಗೆ ಸಾರ್ವಜನಿಕರು ಪ್ರಾದೇಶಿಕ ಕಚೇರಿಗೆ ಅಲೆದಾಡದೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದರು ತಿಳಿಸಿದರು.