Breaking News

ಮಕ್ಕಳ ಲಸಿಕೆಗೆ ಪೋಷಕರು ಸಹಕಾರ ನೀಡಬೇಕು :ಸಚಿವ ಬಿ.ಸಿ.ನಾಗೇಶ್

Spread the love

ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿರುವ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕಾರ ನೀಡಬೇಕು,ಕೋವಿಡ್ ಜೊತೆ ಜೀವನ ನಡೆಸುವುದು ಅನಿವಾರ್ಯವಾಗಿದ್ದು, ಕೋವಿಡ್ ಎದುರಿಸಲು ಎಲ್ಲರೂ ಲಸಿಕೆ ಪಡೆಯುವುದು ಅಗತ್ಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕರೆ ನೀಡಿದ್ದಾರೆ.

 

ಉಚಿತವಾಗಿ ನೀಡುತ್ತಿರುವ ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ದೇಶದ 145 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರವು ಕೈ ಜೋಡಿಸಿದ್ದು, ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿ ಮಕ್ಕಳಿಗೆ ಲಸಿಕೆ ನೀಡುವುದು ಪ್ರಾರಂಭವಾಗಿದೆ.

ಮಕ್ಕಳಿಗೆ ಲಸಿಕೆ ಕೊಡಿಸಲು ಪೋಷಕರು ಕೂಡ ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಯಾವ ಮಗುವು ಕೂಡ ಕೋವಿಡ್ ಕಾರಣಕ್ಕೆ ಶಿಕ್ಷಣದಿಂದ ವಂಚಿತವಾಗಬಾರದು. ಶಿಕ್ಷಣ ಅಪೂರ್ಣವಾಗಬಾರದು. ಹೀಗಾಗಿ ಲಸಿಕೆ ಪಡೆಯುವುದು ಅಗತ್ಯ. ಲಸಿಕೆ ಪಡೆದ ನಂತರ ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆ ನಡೆಸಲು ಸಾಧ್ಯವಾಗಲಿದೆ.

ಲಸಿಕೆ ಪಡೆದರೂ ಕೂಡ ಸ್ವಚ್ಛತೆ, ಅಂತರ, ಮಾಸ್ಕ್ ಧರಿಸುವಿಕೆ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ಸಂಭವನೀಯ ಕೋವಿಡ್ 3ನೇ ಅಲೆಯನ್ನು ತಡೆಯಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ