Breaking News

ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

Spread the love

ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಪಟ್ಟಣದಲ್ಲಿ ನಿರ್ಮಿಸಿದ ನೂತನ ಶಾದಿ ಮಹಲ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿಅನೇಕ ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಶಾದಿ ಮಹಲ್ ಗಳನ್ನು ನಿರ್ಮಿಸಲಾಗಿದೆ. ಇವುಗಳನ್ನುಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಯಮಕನಮರಡಿಯಲ್ಲಿ ಶಾದಿ ಮಹಲ್ ನಿರ್ಮಿಸಬೇಕು ಎಂದು ಮುಸ್ಲಿಂ ಬಾಂಧವರ ಬೇಡಿಕೆಯಾಗಿತ್ತು. ಅನುದಾನ ಕೊರತೆಯಿಂದ ಶಾದಿ ಮಹಲ್ ಕಟ್ಟಡ ನಿರ್ಮಾಣ ಕಾರ್ಯ ವಿಳಂಬವಾಯಿತು. ಆದರೆ ಇಂದು ನಿಮ್ಮ ಬೇಡಿಕೆ ಈಡೇರಿದೆ. ಈ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು, ಮುಖಂಡರು ಸಹಕಾರ ನೀಡಿದ್ದಾರೆ. ಇನ್ನೂ ಅನೇಕ ಗ್ರಾಮಗಳಲ್ಲಿ ಸಮುದಾಯ ಭವನ, ಶಾದಿ ಮಹಲ್ ಗಳನ್ನು ನಿರ್ಮಾಣ ಮಾಡಲಾಗುವುದು. ಕ್ಷೇತ್ರದ ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲಾಗಿದ್ದು, ಶಿಕ್ಷಣ ಕ್ಷೇತ್ರಕ್ಕೂ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

: ಇದೇ ವೇಳೆ ಹಾಜಿ ಶರೀಫ್ ಇಮಾಮಸಾಬ ಬೇಪಾರಿ ಮಾತನಾಡಿ, ನೂತನ ಶಾದಿ ಮಹಲ್ ಕಟ್ಟಡಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ನಾಮಕರಣ ಮಾಡೋಣ ಎಂದು ಸಮಾಜದ ಮುಖಂಡರಿಗೆ ವಿನಂತಿಸಿದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ