Breaking News

ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ.?

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ( Bengaluru ) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಮಹಾಸ್ಪೋಟವೇ ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ ಹೆಚ್ಚಳವಾಗುತ್ತಿದೆ.

ಇದೇ ಕಾರಣದಿಂದಾಗಿ ನಾಳೆ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ, ಈ ಬಳಿಕ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನಡೆಸಲಿದ್ದಾರೆ. ಈ ಸಭೆಗಳಲ್ಲಿ ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳದ ಪಾಸಿಟಿವಿಟಿ ದರ ಹೆಚ್ಚಳವಿರುವಂತ ಜಿಲ್ಲೆಗಳಲ್ಲಿ ಲಾಕ್ ಡೌನ್ ( Karnataka Lockdown ) ನಂತರ ಕಠಿಣ ರೂಲ್ಸ್ ಜಾರಿಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕರುನಾಡಿಗೆ ಅಪ್ಪಳಿಸಿದ್ಯಾ ಕೊರೋನಾ 3ನೇ ಅಲೆ ( Covid19 3rd Wave ) ಎನ್ನುವ ಭಯವನ್ನು ಬೆಂಗಳೂರಿನ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆಯಿಂದ ಆತಂಕ ಮೂಡಿದೆ. ಇದೇ ಕಾರಣಕ್ಕಾಗಿ ನಾಳೆ ತಜ್ಞರ ನೇತೃತ್ವದಲ್ಲಿ ನಡೆಸಲಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಮಹತ್ವದ ನಿರ್ಧಾರದ ಕ್ರಮಗಳನ್ನು ಪ್ರಕಟಿಸಲಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ