ಮೈಸೂರು: ರಾಮನಗರಕ್ಕೂ ಸಚಿವ ಅಶ್ವತ್ಥ ನಾರಾಯಣ ಅವರಿಗೂ ಏನು ಸಂಬಂಧ, ರಾಮನಗರ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪಟ್ಟಿ ಬಿಡುಗಡೆ ಮಾಡಲು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿ ಅಶ್ವತ್ಥ ನಾರಾಯಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರದಲ್ಲಿ ಮುಖ್ಯಮಂತ್ರಿಗಳ ಎದುರೇ ಸಚಿವ ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ಗಲಾಟೆ ಸಂಬಂಧ ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮನಗರ ಜಿಲ್ಲೆಗೂ ಸಚಿವ ಅಶ್ವತ್ಥ ನಾರಾಯಣ ಅವರಿಗೆ ಏನು ಗೊತ್ತು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೊತ್ತು ಹಾಗಾಗಿ ಅವರು ತಾಲ್ಲೂಕು ಕಚೇರಿ ಸೇರಿದಂತೆ ಹಲವು ಕಟ್ಟಡಗಳನ್ನು ನೀಡಿದ್ದಾರೆ. ಆದರೆ ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ತಿಳಿಸಬೇಕಿದೆ ಎಂದು ಹೇಳಿದರು.
ಬಿಜೆಪಿ ಯವರು ಬರೀ ಸುಳ್ಳುಗಳನ್ನೇ ಹೇಳುತ್ತಾರೆ. ಅವರ ಮಾತಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬಾರದು, ಸಚಿವ ಅಶ್ವತ್ಥ ನಾರಾಯಣ ಏನು ಸಾಧನೆ ಮಾಡಿದ್ದಾರೆ ಎಂದು ತಿಳಿಸಲಿ ಎಂದು ಹೇಳಿದರು.