ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್(Omicron Variant)ಹಾವಳಿ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಮೂಲಕ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ(ಜ.6)ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿಗಳು ನಿಲ್ಲಲಿವೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ(Weekend Curfew) ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ.
ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಬಳಿಕ ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್(K Sudhakar) ಮಾಹಿತಿ ನೀಡಿದ್ದಾರೆ.