Breaking News

ವೀಕೆಂಡ್ ಕರ್ಫ್ಯೂ ವೇಳೆ ಎಂದಿನಂತೆ ಸಂಚರಿಸಲಿವೆ ಕೆಎಸ್‌ಆರ್‌ಟಿಸಿ ಬಸ್‌; ಆದರೆ ಬಿಎಂಟಿಸಿ ಬಸ್‌ ಸಂಚಾರ ಇರಲ್ಲ

Spread the love

ಬೆಂಗಳೂರು: ಒಮಿಕ್ರಾನ್​ ಮತ್ತು ಮೂರನೇ ಅಲೆಯ ತೀವ್ರತೆಯನ್ನು ಅರಿತ ರಾಜ್ಯ ಸರ್ಕಾರ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಅದರಂತೆ ವೀಕೆಂಡ್ ಕರ್ಫ್ಯೂ (Weekend Curfew) ಜಾರಿಗೊಳಿಸಿದೆ. ಮುಂದಿನ ಎರಡು ವಾರಗಳ ಕಾಲ ವೀಕೆಂಡ್​ ಕರ್ಫ್ಯೂ ಇರಲಿದ್ದು, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ ಹಾಗೂ ಹೊರ ರಾಜ್ಯದ ನಡುವೆ ಬಸ್ ಸಂಚಾರ ಇರಲಿದೆ. ಗೋವಾ, ಕೇರಳ, ‌ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದುಕೆಎಸ್‌ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್‌ಗಳ ಸಂಚಾರ ಇರಲ್ಲ
ವೀಕೆಂಡ್ ಕರ್ಫ್ಯೂ ವೇಳೆ ಜನಸಾಮಾನ್ಯರಿಗೆ ಬಿಎಂಟಿಸಿ ಬಸ್‌ಗಳ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಶನಿವಾರ, ಭಾನುವಾರ ಪ್ರಯಾಣಕ್ಕೆ ಬಿಎಂಟಿಸಿ ಬಸ್ ಸಿಗುವುದಿಲ್ಲ. ತುರ್ತು, ಅಗತ್ಯ ಸೇವೆಗಳಿಗೆ ಮಾತ್ರ ವಿಶೇಷ ಬಸ್​ಗಳ ಸೇವೆ ಇರಲಿದೆ ಎಂದು ಟಿವಿ9 ಗೆ ಬಿಎಂಟಿಸಿ ಎಂಡಿ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.

ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ:
ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇರಲಿದೆ. ಮೆಟ್ರೋ ರೈಲಿನಲ್ಲಿ ಸದ್ಯ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಕೊವಿಡ್​ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಿದ್ದೇವೆ. ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಪ್ರಸ್ತುತ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ. ಎಂದು ಟಿವಿ9ಗೆ ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್​ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ