ವಿಧಾನ ಪರಿಷತ್ ಸದಸ್ಯರಾಗಿ ಲಖನ್ ಜಾರಕಿಹೊಳಿ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣ ವಚನ ಬೋಧಿಸಲಿದ್ದಾರೆ.
ಡಿಸೆಂಬರ್ 10ರಂದು ನಡೆದ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸ್ಥಾನದಿಂದ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ.
ಹಾಲಿ ಸದಸ್ಯರಾದ ಬಿಜೆಪಿಯ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರ ವಿವೇಕರಾವ್ ಪಾಟೀಲ ಅವರ ಅವಧಿ ಬುಧವಾರ ಮುಕ್ತಾಯವಾಗಿದೆ.
ಚನ್ನರಾಜ ಹಟ್ಟಿಹೊಳಿ ಮತ್ತು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿರುವ ಲಖನ್ ಜಾರಕಿಹೊಳಿ ಸೇರಿದಂತೆ 25 ನೂತನ ಸದಸ್ಯರು ಗುರುವಾರವೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.