ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪದ ಬಗ್ಗೆ ಭಾರಿ ವಿವಾದದ ನಡುವೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದಾರೆ.
ಪ್ರಧಾನಿ ಮೋದಿ ಭದ್ರತೆಯಲ್ಲಾದ ಪಂಜಾಬ್ ಸರ್ಕಾರ ಮಾಡಿದ ಲೋಪ ದೋಷದ ಬಗ್ಗೆ ಸೋನಿಯಾ ಪ್ರಶ್ನಿಸಿದ್ದಾರೆ.
ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.
ಭದ್ರತಾ ಲೋಪದಿಂದ ಪ್ರಧಾನಿ ಮೋದಿ ಅವರು ಬುಧವಾರ ಪಂಜಾಬ್ ನ ಫಿರೋಜ್ ಪುರ್ ಗೆ ತೆರಳಲು ಆಗಲಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿತ್ತು.ಆದರೆ ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.