Breaking News

BPL ಕಾರ್ಡ್ ಸೇರಿ ಅರ್ಹ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್, ಅನ್ನಭಾಗ್ಯ ಯೋಜನೆಯಡಿ ಉಚಿತ ರೇಷನ್

Spread the love

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜನವರಿ ಮಾಹೆಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 2 ಕೆ.ಜಿ.

ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ.

ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್ ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15 ರೂ. ರಂತೆ ಏಕ ಸದಸ್ಯರ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎ.ಪಿ.ಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿ ವಿತರಿಸಲಾಗುವುದು.

ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19 ಸೊಂಕು ಹರುಡುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಪಡಿತರ ಪಡೆಯುವ ಸಮಯದಲ್ಲಿ ಸೋಪ್/ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿರುತ್ತದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ದೂರನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿತ್ರದುರ್ಗ ಬಸ್​ ದುರಂತ: ಗಾಯಗೊಂಡಿದ್ದ ಬಸ್​ ಚಾಲಕ ಸಾವು

Spread the loveಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್​ ​ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ