Breaking News

ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ:

Spread the love

ಬೆಂಗಳೂರು: ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್​ ಹೆಚ್ಚಳದ ಹಿನ್ನೆಲೆ ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್​ ಕರ್ಫ್ಯೂ ಇರಲಿದೆ. ಅದರಂತೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬಾರ್ ಮಾಲಿಕರು ಮನವಿ ಮಾಡಿದರು. ಆದರೆ ಅನಿವಾರ್ಯವಾಗಿ ಜನರ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಇಂದು ರಾತ್ರಿ  8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್​ ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ