Breaking News

ಪರಿಹಾರ ಮೊತ್ತ ಸ್ವೀಕರಿಸಲು ನಿರಾಕರಣೆ ಮಾಡುತ್ತಿರುವ COVID-19 ಮೃತ ಕುಟುಂಬಸ್ಥರು

Spread the love

ಬೆಂಗಳೂರು: Covid Death: ಈ ಹಿಂದೆ ಸರ್ಕಾರ ಕೋವಿಡ್-19 (Covid-19) ರಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಣೆ ಮಾಡಿದ್ದು, ವಿಳಂಬವಾದರೂ ಪರಿಹಾರ ಮೊತ್ತ ಬ್ಯಾಂಕ್ ಖಾತೆಗೆ ಜಮಾವಣೆ ಆಗಲು ಪ್ರಾರಂಭ ಆಗಿದೆ. ಆಶ್ಚರ್ಯ ಎಂದರೆ ಅನೇಕ ಕುಟುಂಬದವರು ಪರಿಹಾರ ಸ್ವೀಕಾರ ಮಾಡಲು ನಿರಾಕರಿಸುತ್ತಿದ್ದಾರೆ.

 

ಬಿಪಿಎಲ್ (BPL) ಪಡಿತರ ಚೀಟಿ ಹೊಂದಿರುವ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್-19 (Covid-19) ಸೋಂಕಿನಿಂದ ಮೃತಪಟ್ಟರೆ ರಾಜ್ಯ ಸರ್ಕಾರ ₹1 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ಇದರ ಜತೆಗೆ ಕೇಂದ್ರ ಸರ್ಕಾರ ಕೂಡ ₹50 ಸಾವಿರ ಪರಿಹಾರ ಘೋಷಣೆ ಮಾಡಿತ್ತು. ಹೀಗಾಗಿ, ಬಿಪಿಎಲ್ ಕುಟುಂಬದ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟ ಸಂದರ್ಭದಲ್ಲಿ ಒಟ್ಟು ₹1.50 ಲಕ್ಷ ಪರಿಹಾರದ ಮೊತ್ತವನ್ನು ಮೃತರ ವಾರಸುದಾರರಿಗೆ ನೀಡಲಾಗುತ್ತಿದೆ.

ಕಂದಾಯ ಇಲಾಖೆ ಅಂಕಿಅಂಶಗಳ ಪ್ರಕಾರ ಈವರೆಗೆ 22,661 ಪರಿಹಾರ ಹಣ ಕೋರಿ ಅರ್ಜಿ ಸ್ವೀಕರಿಸಿದೆ. ಆ ಪೈಕಿ ಬಿಪಿಎಲ್ (BPL) ಕುಟುಂಬದ ವಾರಸುದಾರರು 13,423 ಅರ್ಜಿ ಸಲ್ಲಿಸಿದ್ದಾರೆ. ಇನ್ನು ಎಪಿಎಲ್ ಕಾರ್ಡ್ ದಾರರು ಪರಿಹಾರ ಕೋರಿ 13,238 ಅರ್ಜಿ ಸಲ್ಲಿಸಿದ್ದಾರೆ.

825 ಮಂದಿಯಿಂದ ಪರಿಹಾರ ನಿರಾಕರಣೆ:
ಅದಾಗ್ಯೂ, ಒಟ್ಟು 825 ಮಂದಿ ಫಲಾನುಭವಿಗಳು ಪರಿಹಾರ ಮೊತ್ತವನ್ನು ಪಡೆಯಲು ನಿರಾಕರಿಸಿದ್ದಾರೆ. ಬೆಂಗಳೂರಿನ (Bengaluru) 481 ಮಂದಿ ಫಲಾನುಭವಿಗಳು ಪರಿಹಾರ (Covid-19 Compensation) ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಇದಲ್ಲದೆ, ಕೋಲಾರದ 55, ಬೆಂಗಳೂರು ನಗರದಿಂದ 37, ಧಾರವಾಡದ 29, ಮೈಸೂರಿನ 26, ಹಾಸನದ 25, ದ.ಕನ್ನಡ ಜಿಲ್ಲೆಯ 21 ಮಂದಿ ಫಲಾನುಭವಿಗಳು ಪರಿಹಾರವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸ್ಥಿತಿವಂತ ಕುಟುಂಬಸ್ಥ ಹಲವರು ಪರಿಹಾರ ಮೊತ್ತ ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಇತರೆ ರಾಜ್ಯಗಳ 476 ಫಲಾನುಭವಿಗಳಾಗಿದ್ದಾರೆ. ಅವರಿಗೆ ಪರಿಹಾರ ಹಣ ನೀಡಿಲ್ಲ. 1436 ಫಲಾನುಭವಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಈವರೆಗೆ ಒಟ್ಟು 3043 ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡಲು ಸಾಧ್ಯವಾಗಿಲ್ಲ.

ಇನ್ನು ಉಳಿದಂತೆ ಬಿಪಿಎಲ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ 1 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈವರೆಗೆ 25,281 ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ. ಈ ಪರಿಹಾರ ಪೈಕಿ ಕೇಂದ್ರ ಸರ್ಕಾರ ಘೋಷಿಸಿರುವ 50,000 ಪರಿಹಾರವೂ ಒಳಗೊಂಡಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಇದಲ್ಲದೆ, ಆಧಾರ್ ಕಾರ್ಡ್ (Aadhaar Card) ಇಲ್ಲದ ಕಾರಣ ಒಟ್ಟು 4,000 ಅರ್ಜಿಗಳ ಪಾವತಿಯನ್ನು ಸದ್ಯಕ್ಕೆ ತಡೆ ಹಿಡಿಯಲಾಗಿದೆ. ಅವರಿಗೆ ಆಧಾರ್ ಸಂಖ್ಯೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಆಧಾರ್ ಕಾರ್ಡ್ ಮಾಹಿತಿ ನೀಡಿದ ತಕ್ಷಣ ಅವರ ಖಾತೆಗೂ ಪರಿಹಾರ ಹಣ ಜಮೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ