Breaking News
Home / ರಾಜಕೀಯ / ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 1 ಲಕ್ಷದ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಕ್ಷಣ ಕ್ಷಣಕ್ಕೂ ಕಾಡುತ್ತಿದೆ ಒಮಿಕ್ರಾನ್ ಆತಂಕ

ಕೊರೊನಾ ಸ್ಫೋಟ; ಒಂದೇ ದಿನದಲ್ಲಿ 1 ಲಕ್ಷದ 17 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಕ್ಷಣ ಕ್ಷಣಕ್ಕೂ ಕಾಡುತ್ತಿದೆ ಒಮಿಕ್ರಾನ್ ಆತಂಕ

Spread the love

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,17,100 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.7.74ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483178 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 371363 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 30836 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34371845 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,13,377 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 94,47,056 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,49,66,81,156 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ