Breaking News

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸೆರ್ಲಾಕ್​ ಪ್ಯಾಕ್​ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮಹಿಳೆ ಬಂಧನ

Spread the love

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿರುವ ಬೆಂಗಳೂರು ಎನ್​ಸಿಬಿ ಅಧಿಕಾರಿಗಳು ಸುಮಾರು 1.5 ಕೋಟಿ ರೂ. ಮೌಲ್ಯದ 995 ಗ್ರಾಂ ಡ್ರಗ್ಸ್ (Methamphetamine)​ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತು ಸಾಗಿಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ನಿಖರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಈ ಕಾರ್ಯಾಚರಣೆ ನಡೆದಿದೆ.

ಉಗಾಂಡ ಮೂಲದ ಮಹಿಳೆಯು ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ರಾಜ್ಯದಲ್ಲಿ ಮಾರಾಟಕ್ಕೆ ಮುಂದಾಗಿದ್ದಳು ಎಂದು ತಿಳಿದು ಬಂದಿದೆ. ಮಕ್ಕಳಿಗೆ ಆಹಾರವಾಗಿ ನೀಡಲಾಗುವ ಸೆರ್ಲಾಕ್‌ನ ಎರಡು ಪ್ಯಾಕ್‌ನಲ್ಲಿ ಇಟ್ಟು ಸಾಗಿಸಲಾಗುತ್ತಿತ್ತು . ಪ್ರತಿ ಪ್ಯಾಕ್‌ನಲ್ಲಿ ಸುಮಾರು 500 ಗ್ರಾಂ ಮಾದಕ ವಸ್ತು ಪತ್ತೆಯಾಗಿದೆ . ಇದರ ಮೌಲ್ಯವು ಸುಮಾರು ಸುಮಾರು 1.5 ಕೋಟಿ ರೂ . ಎಂದು ತಿಳಿದು ಬಂದಿದೆ . ಸದ್ಯ ಡ್ರಗ್ಸ್ ವಶಕ್ಕೆ ಪಡೆದು ಮಹಿಳೆಯನ್ನು ಬಂಧಿಸಿರುವ ಎನ್‌ಸಿಬಿ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ