Breaking News

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್​ಮೇಲ್ : ಆರೋಪಿ ಬಂಧನ

Spread the love

ಬೆಂಗಳೂರು : ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ‌.ಸೋಮಶೇಖರ್ ಪುತ್ರನಿಗೆ ಕರೆ‌ ಮಾಡಿ ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದಡಿ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೋಮಶೇಖರ್ ಪುತ್ರ ನಿಶಾಂತ್ ನೀಡಿದ ದೂರಿನ ಮೇರೆಗೆ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬಾತನನ್ನು ಬಂಧಿಸಲಾಗಿದೆ. ಐದು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

 

one arrested who blackmailed to son of minister somashekar

ಕಳೆದ ತಿಂಗಳು 25ರಂದು ನಿಶಾಂತ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ನನ್ನ ಹಾಗೂ ತಂದೆಯನ್ನು ರಾಜಕೀಯವಾಗಿ ತೇಜೋವಧೆಗೆ ಗುರಿಯಾಗಿಸಿಕೊಂಡು ಅಪರಿಚಿತರು ಅಶ್ಲೀಲ ವಿಡಿಯೋಗೆ ನನ್ನ ಭಾವಚಿತ್ರ ಸೇರಿಸಿ ನನಗೆ ವಾಟ್ಸ್‌ಆ್ಯಪ್ ಕರೆ ಮಾಡಿ ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿಶಾಂತ್ ದೂರು ನೀಡಿದ್ದರು‌.‌ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾಹುಲ್ ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ತನಿಖೆ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿವೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ