Breaking News

ಬೆಳಗಾವಿ ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿಸಿ ಭೇಟಿ : ಕಟ್ಟುನಿಟ್ಟಿನ ತಪಾಸಣೆ ಮಾಡುವಂತೆ ಸೂಚನೆ

Spread the love

ಬೆಳಗಾವಿ : ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಕಾಗವಾಡ ತಾಲೂಕಿನ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ನೀಡಿ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಈ ವೇಳೆ ಚೆಕ್ ಪೋಸ್ಟ್‌ನಲ್ಲಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುವಂತೆ ಸೂಚಿಸಿದರು.

Thumbnail image

 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕಿತ ಪ್ರಕರಣ ಹೆಚ್ಚಳವಾಗುತ್ತಿವೆ‌. ಹೀಗಾಗಿ, ಮಹಾರಾಷ್ಟ್ರದಿಂದ ಆಗಮಿಸುವ ಜನರ ಅನವಶ್ಯಕ ಓಡಾಟಕ್ಕೆ ಬ್ರೇಕ್ ಹಾಕಲ ಗಡಿಭಾಗದಲ್ಲಿ 23 ಚೆಕ್ ಪೋಸ್ಟ್​​​ಗಳನ್ನು ನಿರ್ಮಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್‌ ಆಗಿದೆ. ಶೇ.85ರಷ್ಟು ಎರಡನೇ ಡೋಸ್ ವ್ಯಾಕ್ಸಿನೇಷನ್‌ ಆಗಿದೆ. ಇದರ ಜೊತೆಗೆ 15 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಗೆ ಶೇ.65ರಷ್ಟು ವ್ಯಾಕ್ಸಿನೇಷನ್‌ ಮಾಡಲಾಗಿದೆ.ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಬೂಸ್ಟರ್ ಡೋಸ್​​ ನೀಡುವ ಕೆಲಸ ಆರಂಭವಾಗಲಿದೆ ಎಂದರು. ಗ್ರಾಮೀಣ ಭಾಗದಲ್ಲಿ ಜನರ ಸಂಚಾರ ದಟ್ಟಣೆ, ಗುಂಪುಗೂಡುವಿಕೆ ಇಲ್ಲ. ಪಟ್ಟಣಗಳಲ್ಲೂ ಜನರು ವೀಕೆಂಡ್ ಕರ್ಫ್ಯೂ ಪಾಲಿಸುವ ಅಗತ್ಯತೆ ಇದೆ. ಜನರು ಸಹಕರಿಸಬೇಕು ಎಂದರು.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ