ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಯಲ್ಲಿ ಸ್ಯಾಂಡಲ್ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಭಾಗಿಯಾಗುತ್ತಾರೆ. ನಿನ್ನೆಯೂ ಅರ್ಧ ದಾರಿಗೆ ಬಂದು ವಾಪಸ್ ಹೋಗಿದ್ದಾರೆ. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ. ಎಲ್ಲರೂ ಇದಕ್ಕೆ ಕೈ ಜೋಡಿಸಬೇಕು. ಬಿಜೆಪಿಯವರೇ ಇದರಲ್ಲಿ ರಾಜಕೀಯ ಮಾಡದೇ ಯೋಜನೆ ಜಾರಿ ಮಾಡಲಿ. ಈ ಪಾದಯಾತ್ರೆ ಯಶಸ್ವಿಯಾಗಿ ಸಾಗಲಿದೆ. ಕನ್ನಡ ಚಿತ್ರರಂಗ ಕೂಡ ಕೈ ಜೋಡಿಸಲಿದೆ ಎಂದು ಟಿವಿ9ಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ನಟ ಶಿವರಾಜ್‌ಕುಮಾರ್ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವೆ ಉಮಾಶ್ರೀ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಮ್ಮ ಸ್ಯಾಂಡಲ್ ವುಡ್ ಸಂಪೂರ್ಣವಾಗಿ ಕೈ ಜೋಡಿಸಿದೆ. ಅಣೆಕಟ್ಟು ನಿರ್ಮಾಣವಾಗಲೇಬೇಕು. ಈ ಪಾದಯಾತ್ರೆಯಲ್ಲಿ ಜನರು ತೋರಿಸುತ್ತಿರುವ ಪ್ರೀತಿ ಸಹಕಾರ ತುಂಬಾ ದೊಡ್ಡದು. ಬೆಂಗಳೂರುವರೆಗೂ ಯಶಸ್ವಿಯಾಗಿ ಪಾದಯಾತ್ರೆ ಸಾಗಲಿದೆ. ಹೋರಾಟದ ಹೆಜ್ಜೆಗೆ ನಮ್ಮ ಮಹಿಳಾ ಶಕ್ತಿ ಕೂಡ ದೊಡ್ಡಮಟ್ಟದಲ್ಲೇ ಕೈ ಜೋಡಿಸಿದೆ ಎಂದು ಉಮಾಶ್ರೀ ಹೇಳಿದ್ದಾರೆ.