ಬೆಂಗಳೂರು: ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೀಘ್ರ ಚೇತರಿಸಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾರೈಸಿದ್ದಾರೆ.
ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭ ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬನ್ನಿ ಎಂದು ಹಾರೈಸಿದ್ದಾರೆ.ಮುಖ್ಯಮಂತ್ರಿಯವರು ಕೊರೊನಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯಗೆ ಸಿಎಂ ಪ್ರತಿಯಾಗಿ ಧನ್ಯವಾದ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ನಿನ್ನೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭಾರತ ಅವರಿಗೂ ಕೊರೊನಾ ದೃಢಪಟ್ಟಿದ್ದು, ಅವರು ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ.