Breaking News

ಸರಕಾರಿ ನೌಕರರ ಸೌಲಭ್ಯ ಕೊಡಲಾಗದು: ಸುಪ್ರೀಂ ಕೋರ್ಟ್‌

Spread the love

ಹೊಸದಿಲ್ಲಿ: ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬಂದಿಗೆ ಸರಕಾರಿ ನೌಕರರಿಗಿರುವ ಸೌಲಭ್ಯಗಳನ್ನು ಕೊಡಲಾಗದು. ಅವರು ಅದನ್ನು ಹಕ್ಕೆಂದು ಕೇಳಬಾರದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಮಹಾರಾಷ್ಟ್ರದ ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ (ಡಬ್ಲ್ಯುಎಎಲ್‌ಎಂಐ)ಯ ಸಿಬಂದಿಗೆ ಪಿಂಚಣಿ ಸೌಲಭ್ಯ ವಿಸ್ತರಿಸುವುದಕ್ಕೆ ಬಾಂಬೆ ಹೈಕೋರ್ಟ್‌ ಮಹಾರಾಷ್ಟ್ರ ಸರಕಾರಕ್ಕೆ ಆದೇಶಿಸಿದ್ದನ್ನು ವಿರೋಧಿಸಿ, ಮಹಾರಾಷ್ಟ್ರ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು.

ಅದರ ವಿಚಾರಣೆ ಮಾಡಿರುವ ನ್ಯಾಯಾಲಯ ರಾಜ್ಯ ಸರಕಾರದ ಪರವಾಗಿ ಮಾತನಾಡಿದೆ.

“ಖಾಸಗಿ ಸಂಸ್ಥೆಗಳು ಸರಕಾರಿ ಸಂಸ್ಥೆಗಳಂತೆ ನಿಯಮ ಮಾಡಿಕೊಂಡ ಮಾತ್ರಕ್ಕೆ ಸರಕಾರಿ ನೌಕರರ ಸೌಲಭ್ಯ ಕೊಡಿ ಎಂದು ಕೇಳಲಾಗದು. ಅವರಿಗೆ ಸೌಲಭ್ಯ ಕೊಡುವುದು ಆಯಾ ಸಂಸ್ಥೆಗಳ ಜವಾಬ್ದಾರಿ’ ಎಂದು ನ್ಯಾಯಾಲಯ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ