ಭದ್ರಾವತಿ ತಾಲೂಕಿನ ಗ್ರಾಮವೊಂದರ ವಿದ್ಯಾರ್ಥಿನಿ ಇಂದು ಬೆಳಗ್ಗೆ ಶಾಲೆಗೆ ಹೋಗುವಾಗ ಮಾರುತಿ ಓಮಿನಿ ಕಾರಿನಲ್ಲಿ ಬಂದು ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ದುಷ್ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯನ್ನು ಕಾರಿನಲ್ಲಿ ತರೀಕೆರೆ ತನಕ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ. ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಪ್ರಜ್ಞೆ ಬಂದಾಗ ವಿದ್ಯಾರ್ಥಿನಿಯೇ ಬಸ್‌ನಲ್ಲಿ ತನ್ನ ಮನೆಗೆ ವಾಪಸ್ ಆಗಿದ್ದಾಳೆ. ಪೋಷಕರು ಆಕೆಯ ಸ್ಥಿತಿಕಂಡು ವಿಚಾರಿಸಿ, ನಂತರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಶಿವಮೊಗ್ಗದ ಸಖಿ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ.