Breaking News

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

Spread the love

ಬೆಳಗಾವಿ, ಜ.11: ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಆಧ್ಯಾತ್ಮ ಪ್ರವಚನಕ್ಕಾಗಿ ತೆರಳಿದ್ದ ಅವರು ಅಲ್ಲಿನ ಭಕ್ತರೊಬ್ಬರ ತೋಟದ ಮನೆಯೊಂದರಲ್ಲಿ ಉಳಿದುಕೊಂಡಿದ್ದರು.

ಸ್ನಾನ ಗೃಹದಲ್ಲಿ ಕಾಲು ಜಾರಿ ಬಿದ್ದ ಕಾರಣ ಗಾಯಗೊಂಡಿದ್ದಾರೆ.

ಕೂಡಲೇ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಚಿಕ್ಕೋಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಹರಾಷ್ಟ್ರದ ಕನ್ಹೇರಿ ಮಠದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭುಜ ಹಾಗೂ ತೊಡೆಯ ಮೇಲ್ಭಾಗದಲ್ಲಿ ಮೂಳೆಗೆ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಒದಗಿಸಲಾಗುತ್ತಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ