Breaking News

ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್: ದೇವಸ್ಥಾನಕ್ಕೆ ಕೇವಲ 50 ಜನರಿಗೆ ಮಾತ್ರ ಅವಕಾಶ

Spread the love

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ವಿರ್ಚುಯಲ್ ಸಭೆ ನಡೆಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿಗೊಳಿಸೋ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದೇ ಸಂದರ್ಭದಲ್ಲಿ ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್ ಜಾರಿಗೊಳಿಸುತ್ತಿರುವಂತ ಸರ್ಕಾರ, ಕೇವಲ 50 ಜನರಿಗೆ ಮಾತ್ರ ಶ್ರೀನಿವಾಸ ಸ್ವಾಮಿಯ ದರ್ಶನ ಪಡೆಯೋದಕ್ಕೆ ಅವಕಾಶ ನೀಡಲಿದೆ ಎನ್ನಲಾಗುತ್ತಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ನಗರದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಹಲವು ನಿಯಂತ್ರಣ ಕ್ರಮಗಳ ಕುರಿತಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಜನರು ಕೋವಿಡ್ ನಿಯಂತ್ರಣಕ್ಕಾಗಿ ಕೊರೋನಾ ಮಾರ್ಗಸೂಚಿ ಅನುಸರಿಸಬೇಕು. ಮಾಸ್ಕ್, ಸಾಮಾಜಿಕ ಅಂತರವನ್ನು, ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಕ್ರಮಗಳನ್ನು ಪಾಲಿಸಬೇಕು ಎಂಬುದಾಗಿ ಮನವಿ ಮಾಡಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ