Breaking News

ತಮಿಳುನಾಡಿಗೆ ನಿಗದಿಗಿಂತ ಹೆಚ್ಚು ನೀರು

Spread the love

ಬೆಂಗಳೂರು: ಮೇಕೆದಾಟು ಯೋಜನೆಗೆ ಅತ್ತ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಲೇ ಇದ್ದರೆ, ಇತ್ತ ಕಾವೇರಿಯಿಂದ ತಮಿಳುನಾಡಿಗೆ ಬಿಡಬೇಕಾದ ನೀರು ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಹರಿದು ಹೋಗಿದೆ.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪಿನ ಪ್ರಕಾರ, ಸಾಮಾನ್ಯ ಜಲವರ್ಷದಲ್ಲಿ ತಮಿಳುನಾಡಿಗೆ 2018-19ನೇ ಸಾಲಿನಿಂದ 177.25 ಟಿಎಂಸಿ ಅಡಿ ನೀರು ಬಿಡಬೇಕಿದೆ. ಆದರೆ, ಪ್ರಸಕ್ತ ವರ್ಷವೂ ಸೇರಿ ಕಳೆದ ನಾಲ್ಕು ವರ್ಷಗಳಲ್ಲಿ ಈ ಪ್ರಮಾಣಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ.

ಕಾವೇರಿ ನ್ಯಾಯ ಮಂಡಳಿಯ 2007ರ ಫೆ. 5ರ ಅಂತಿಮ ತೀರ್ಪಿನ ಅನ್ವಯ ಸಾಮಾನ್ಯ ಜಲವರ್ಷದಲ್ಲಿ ಕಾವೇರಿಯಿಂದ ತಮಿಳುನಾಡಿಗೆ 192 ಟಿಎಂಸಿ ಅಡಿ ಹರಿಸಬೇಕಿತ್ತು. ಈ ನೀರಿನ ಪ್ರಮಾಣದ ಹಂಚಿಕೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ಮೇಲೆ ಸುಪ್ರೀಂ ಕೋರ್ಟ್‌ 2018ರ ಫೆ. 16ರಂದು ನೀಡಿದ ತೀರ್ಪಿನಲ್ಲಿ 177.25 ಟಿಎಂಸಿ ಅಡಿಗೆ ಇಳಿಸಿತ್ತು.

ಜಲವರ್ಷ 2011-12ರಿಂದ 2017-18ರವರೆಗಿನ ಅವಧಿಯಲ್ಲಿ 2012-13 ಮತ್ತು 2015ರಿಂದ 2018ರವರೆಗಿನ ಮೂರು ವರ್ಷಗಳ ಅವಧಿಯಲ್ಲಿ ತಮಿಳುನಾಡಿಗೆ ನಿಗದಿಪಡಿಸಿದ್ದಕ್ಕಿಂತ ಕಡಿಮೆ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿತ್ತು. ಇದು ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಜಲ ಸಂಘರ್ಷಕ್ಕೆ ಕಾರಣವಾಗಿತ್ತು.

 


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ