ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಾಣಾಳು ಗ್ರಾಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗಂಡಸ್ತನವನ್ನು ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕು. ಪರಿಸರ ಇಲಾಖೆ, ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಅಲ್ಲಿ ಗಂಡಸ್ತನ ತೋರಿಸಬೇಕು ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.