Breaking News

ನಾಳೆಯಿಂದ 1 ರಿಂದ 8ನೇ ತರಗತಿಗೆ ರಜೆ ಘೋಷಿಸಿ, ಧಾರವಾಡ ಜಿಲ್ಲಾಧಿಕಾರಿ ಆದೇಶ

Spread the love

ಧಾರವಾಡ: ಜಿಲ್ಲೆಯಲ್ಲಿ ದಿನೇ ದಿನೇ ಮಕ್ಕಳಿಗೂ ಕೊರೋನಾ ಸೋಂಕು ತುಗುಲಿತ್ತಿರೋ ಕಾರಣ, ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದಂತ ತಾಲೂಕಿನ 1 ರಿಂದ 8ನೇ ತರಗತಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಆದೇಶಿಸಿದ್ದಾರೆ.

 

ಈ ಬಗ್ಗೆ ಆದೇಶ ಹೊರಡಿಸಿರುವಂತ ಅವರು, ಜಿಲ್ಲೆಯಲ್ಲಿನ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಂತ ಶಾಲೆಗಳ ತಾಲೂಕಿನಲ್ಲಿ 1 ರಿಂದ 8ನೇ ತರಗತಿಯವರೆಗೆ ನಾಳೆಯಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಜೆಯನ್ನು ಘೋಷಣೆ ಮಾಡಿ ಆದೇಶಿಸಿದ್ದಾರೆ.

ಇನ್ನೂ 1 ರಿಂದ 8ನೇ ತರಗತಿಗೆ ಮಾತ್ರವೇ ರಜೆಯನ್ನು ಘೋಷಿಸಲಾಗಿದ್ದು, ಇತರೆ ತರಗತಿಗಳು ಎಂದಿನಂತೆ ನಡೆಯಲಿವೆ. 9, 10 ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ಇಲ್ಲ. ಈ ಆದೇಶ ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ