Breaking News
Home / new delhi / ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.

ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.

Spread the love

ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.

ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ ಮಹತ್ವ ವಹಿಸುತ್ತಿದೆ. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಪಡೆದು ಒಳ್ಳೆಯ ನಾಗರೀಕರಾಗಿರಿ, ಶಿಕ್ಷಕರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಪ್ರತಿಭಾನ್ವಿತರಾಗಿ ಮಾಡುವುದರೊಂದಿಗೆ ಅವರ ಭವಿಷ್ಯವನ್ನು ಉಜ್ವಲಗೊಳಿಸುಂತೆ ಹೇಳಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ಆಯ್.ಎಸ್.ಪವಾರ, ಉಪನ್ಯಾಸಕರಾದ ವಿ.ಬಿ.ಕಣಿಲದಾರ, ಎಮ್.ಆರ್.ರಾಮಗಾನಟ್ಟಿ, ಎಮ್.ಬಿ.ಹೊಸಮನಿ, ವಿದ್ಯಾರ್ಥಿ ಪ್ರತಿನಿಧಿ ಅಮೀನಾ ಉಡಕೇರಿ ಇದ್ದರು.

 

 


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ