Breaking News

ಡಿಕೆ ಶಿವಕುಮಾರ್ ರಾಜಕೀಯ ಗುರುವಿನಿಂದ ಪಾದಯಾತ್ರೆ ಕೈಬಿಡಲು ಸಲಹೆ

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ಗುರು ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಜನರ ಜೀವಕ್ಕೆ ಹಾನಿ ಉಂಟಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪಾದಯಾತ್ರೆಯನ್ನು ಕೈಬಿಡಲು ಕೋರಿದ್ದಾರೆ.

ತಮ್ಮ ನೇತೃತ್ವದಲ್ಲಿ ಮೇಕದಾಟು ಸಂಗಮದಿಂದ ಬೆಂಗಳೂರಿನವರೆಗೆ ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣಿಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕೆದಾಟು ಅಣಿಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ ಗಮನ ಸಳೆಯಲು ತಾವು ಕೈಗೊಂಡಿರುವ ‘ನೀರಿಗಾಗಿ ನಡಿಗೆ’ ಪಾದಯಾತ್ರೆಯ ಆಹ್ವಾನಕ್ಕೆ ಧನ್ಯವಾದಗಳು. ಈ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಂಪೂರ್ಣ ಸಹಮತವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮನುಕುಲಕ್ಕೆ ಗಂಡಾಂತರವಾಗಿ ಕಾಡುತ್ತಿರುವ ಕೋವಿಡ್ ವೈರಸ್ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಾ ವಿವಿಧ ರೀತಿಯಲ್ಲಿ ರೂಪಾಂತರಗೊಂಡು ನಮ್ಮನ್ನು ಕಾಡುತ್ತಿದೆ. ಇದರ ಬೇನೆಯಿಂದ ಇಡೀ ಪ್ರಪಂಚ ನಲುಗಿ ಹೋಗಿದ್ದು ಹಲವು ಸಾವು ನೋವುಗಳು ಸಂಭವಿಸಿ ಅನಾಹುತ ಸೃಷ್ಟಿಸಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಎಷ್ಟೇ ಪ್ರಯತ್ನಿಸಿದರೂ ಇನ್ನು ತಹಬದಿಗೆ ಬಂದಿಲ್ಲ ಎಂದ್ದಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ