ಬೆಳಗಾವಿ: ಲಾರಿ ಮಹಿಳೆ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್ (40) ಮೃತ ಮಹಿಳೆ. ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ.